ಸಾರಾಂಶ
ಭಾರತ-ಪಾಕಿಸ್ತಾನ ಎರಡೂ ದೇಶಗಳ ನಡುವೆ ಶಾಂತಿ ನೆಲೆಸಬೇಕು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವೆ ಉತ್ಪಾದಕ ಮತ್ತು ಶಾಂತಿಯುತ ಸಂಬಂಧವನ್ನು ಹೊಂದಬೇಕು ಹಾಗೂ ಇದಕ್ಕಾಗಿ ಮಾತುಕತೆ ನಡೆಸಬೇಕು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ತಿಳಿಸಿದ್ದಾರೆ.
ಎರಡನೇ ಭಾರಿ ಪಾಕ್ ಪ್ರಧಾನಿಯಾಗಿ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಹಬಾಸ್ ಶರೀಫ್ ಅವರಿಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಮಿಲ್ಲರ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.‘ಭಾರತ ಮತ್ತು ಪಾಕಿಸ್ತಾನದ ನಡುವೆ ಉತ್ಪಾದಕ ಮತ್ತು ಶಾಂತಿಯುತ ಮಾತುಕತೆಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ ಯಾವುದೇ ಮಾತುಕತೆಯ ವೇಗ, ವ್ಯಾಪ್ತಿ ಮತ್ತು ಸ್ವರೂಪವನ್ನು ನಿರ್ಧರಿಸುವುದು ಭಾರತ ಮತ್ತು ಪಾಕಿಸ್ತಾನಕ್ಕೆ ಬಿಟ್ಟಿದ್ದು’ ಎಂದು ತಿಳಿಸಿದ್ದಾರೆ.