ಸಾರಾಂಶ
ಒಟ್ಟಾವ: ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಸದಾ ದಾಳಿಯ ಭೀತಿ ಎದುರಿಸುತ್ತಿರುವ ಹಿಂದೂ ಸಂಘಟನೆಗಳಿಗೆ ಭದ್ರತೆ ನೀಡಲು ಕೆನಡಾ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮವೊಂದಕ್ಕೆ ಭದ್ರತೆ ನೀಡಲು ಪೀಲ್‌ನ ಪೊಲೀಸರು 45 ಲಕ್ಷ ರು. ಹಣವನ್ನು ವೆಚ್ಚದ ರೂಪದಲ್ಲಿ ಕೇಳಿದೆ. ಇದು ನಾಗರಿಕ ಹಕ್ಕುಗಳ ಮೇಲಿನ ದಾಳಿ ಎಂದು ಭಾರತೀಯ ಸಮುದಾಯ ಆರೋಪಿಸಿದೆ.
ಇತ್ತೀಚೆಗೆ ಬ್ರಾಂಪ್ಟನ್‌ನ ಹಿಂದೂ ದೇಗುಲದ ಬಳಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರು. ಬಳಿಕ ಹಿಂದೂ ಸಂಘಟನೆಗಳು ಆಯೋಜಿಸಿದ್ದ ಹಲವು ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿತ್ತು.
''''''''ನಾವು ಕೆನಡಾದಲ್ಲಿ ತೆರಿಗೆ ಕಟ್ಟುತ್ತೇವೆ. ಆದರೆ ಪೀಲ್ ಪೊಲೀಸರು ಸಮಸ್ಯೆ ಬಗೆಹರಿಸುವ ಬದಲು ಈ ರೀತಿ ಪಕ್ಷಪಾತ ಮಾಡುತ್ತಿದ್ದಾರೆ. ಟ್ರುಡೋ ಸರ್ಕಾರ ನಾಗರಿಕ ಹಕ್ಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ'''''''' ಎಂದು ಹಿಂದೂ ಆಕ್ರೋಶ ವ್ಯಕ್ತಪಡಿಸಿವೆ. ಹಿಂದೂಗಳ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಖಲಿಸ್ತಾನಿ ಸಂಘಟನೆಗಳು ಕೆನಡಾ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಈ ಕಾರಣಕ್ಕೆ ಇಂತಹ ಘಟನೆಗಳು ನಡೆಯುತ್ತಿವೆ ಎನ್ನಲಾಗಿದೆ.