ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಪ್ರಮಾಣ

| Published : Aug 08 2024, 01:36 AM IST / Updated: Aug 08 2024, 04:03 AM IST

haseena yunus
ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಪ್ರಮಾಣ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಖಾರ್-ಉಜ್-ಝಮಾನ್ ಹೇಳಿದ್ದಾರೆ.

  ಢಾಕಾ :  ಹಿಂಸಾಪೀಡಿತ ಬಾಂಗ್ಲಾದೇಶದಲ್ಲಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ.ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಖಾರ್-ಉಜ್-ಝಮಾನ್ ಹೇಳಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜ। ವಖಾರ್‌, ಮಧ್ಯಂತರ ಸರ್ಕಾರವು ಗುರುವಾರ ರಾತ್ರಿ 8:00 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ, ಸರ್ಕಾರದ ಸಲಹಾ ಮಂಡಳಿಯು 15 ಸದಸ್ಯರನ್ನು ಹೊಂದಿರಬಹುದು’ ಎಂದು ಹೇಳಿದರು.

84 ವರ್ಷದ ಅರ್ಥಶಾಸ್ತ್ರಜ್ಞ ಯೂನಸ್ ಅವರನ್ನು ಮಂಗಳವಾರ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಕ ಮಾಡಿದ್ದರು.

ಕಳೆದ ಭಾನುವಾರ ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿ ಹಿಂದಿನ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದರು.