ನಮ್ಮ ಸಹನೆ ಪರೀಕ್ಷಿಸಬೇಡಿ: ನೆತನ್ಯಾಹು ಗುಡುಗು
KannadaprabhaNewsNetwork | Published : Oct 17 2023, 12:45 AM IST
ನಮ್ಮ ಸಹನೆ ಪರೀಕ್ಷಿಸಬೇಡಿ: ನೆತನ್ಯಾಹು ಗುಡುಗು
ಸಾರಾಂಶ
ಉತ್ತರ ಗಾಜಾ ಪ್ರದೇಶದಲ್ಲಿ ತಾವು ನೀಡಿರುವ ಸೂಚನೆಯಂತೆ ನಾಗರಿಕರನ್ನು ಸ್ಥಳಾಂತರಿಸಲು ಅಡ್ಡಿ ಮಾಡುತ್ತಿರುವ ಹಮಾಸ್ ಬಂಡುಕೋರರಿಗೆ ಸಹಾಯ ಮಾಡುತ್ತಿರುವ ಹಿಜ್ಬುಲ್ಲಾ ಸಂಘಟನೆ ಹಾಗೂ ಇರಾನ್‌ಗೆ ಬೆಂಜಮಿನ್ ನೆತನ್ಯಾಹು ತಮ್ಮ ಸಹನೆ ಪರೀಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ.
ರಫಾ: ಉತ್ತರ ಗಾಜಾ ಪ್ರದೇಶದಲ್ಲಿ ತಾವು ನೀಡಿರುವ ಸೂಚನೆಯಂತೆ ನಾಗರಿಕರನ್ನು ಸ್ಥಳಾಂತರಿಸಲು ಅಡ್ಡಿ ಮಾಡುತ್ತಿರುವ ಹಮಾಸ್ ಬಂಡುಕೋರರಿಗೆ ಸಹಾಯ ಮಾಡುತ್ತಿರುವ ಹಿಜ್ಬುಲ್ಲಾ ಸಂಘಟನೆ ಹಾಗೂ ಇರಾನ್‌ಗೆ ಬೆಂಜಮಿನ್ ನೆತನ್ಯಾಹು ತಮ್ಮ ಸಹನೆ ಪರೀಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ. ಇಸ್ರೇಲ್ ಸಂಸತ್ತು (ನೆಸೆಟ್) ಉದ್ದೇಶಿಸಿ ಮಾತನಾಡಿದ ಅವರು, ‘ಗಾಜಾ ಪಟ್ಟಿಯಲ್ಲಿರುವ ಹಮಾಸ್ ಉಗ್ರರನ್ನು ಸದೆಬಡಿಯಲು ಸಮಸ್ತ ವಿಶ್ವ ಸಮುದಾಯ ಒಂದುಗೂಡಬೇಕು. ಇದು ನಿಮ್ಮದೇ ಯುದ್ಧ. ಗಾಜಾ ಪಟ್ಟಿಯಲ್ಲಿರುವ ಅಮಾಯಕ ನಾಗರಿಕರ ಸ್ಥಳಾಂತರ ವಿಚಾರದಲ್ಲಿ ತಮ್ಮ ಸಹನೆಯನ್ನು ಪರೀಕ್ಷಿಸಿದರೆ ಹಿಜ್ಬುಲ್ಲಾ ಹಾಗೂ ಇರಾನ್‌ಗೆ ತಕ್ಕ ಪ್ರತ್ಯುತ್ತರ ನೀಡಲು ಸಿದ್ಧರಿದ್ದೇವೆ’ ಎನ್ನುವ ಮೂಲಕ ಬೆಂಜಮಿನ್ ಹಮಾಸ್ ಬೆಂಬಲಿಗರಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.