ಸಾರಾಂಶ
ಕೆನಡಾ ಸಂಸತ್ತಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಲಿಬರಲ್ ಪಕ್ಷ ಮತ್ತೆ ಅಧಿಕಾರಕ್ಕೆ ಏರುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಜಸ್ಟಿನ್ ಟ್ರುಡೋ ರಾಜೀನಾಮೆ ಬಳಿಕ ಪ್ರಧಾನಿ ಹುದ್ದೆ ಏರಿದ್ದ ಮಾರ್ಕ್ ಕಾರ್ನಿ ಮತ್ತೆ ಪ್ರಧಾನಿಯಾಗಿ ಮುಂದುವರೆಯುವುದು ಖಚಿತವಾಗಿದೆ.
ಟೊರಾಂಟೋ: ಕೆನಡಾ ಸಂಸತ್ತಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಲಿಬರಲ್ ಪಕ್ಷ ಮತ್ತೆ ಅಧಿಕಾರಕ್ಕೆ ಏರುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಜಸ್ಟಿನ್ ಟ್ರುಡೋ ರಾಜೀನಾಮೆ ಬಳಿಕ ಪ್ರಧಾನಿ ಹುದ್ದೆ ಏರಿದ್ದ ಮಾರ್ಕ್ ಕಾರ್ನಿ ಮತ್ತೆ ಪ್ರಧಾನಿಯಾಗಿ ಮುಂದುವರೆಯುವುದು ಖಚಿತವಾಗಿದೆ. ಮಾರ್ಕ್ ಗೆಲುವು ಸಾಧಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದು, ''''''''ಭಾರತ ಮತ್ತು ಕೆನಡಾದ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಎರಡೂ ಜನರಿಗೆ ಹೆಚ್ಚಿನ ಅವಕಾಶಗಳನ್ನು ತೆರೆಯಲು ರಾಷ್ಟ್ರ ಎದುರು ನೋಡುತ್ತಿದೆ'''''''' ಎಂದು ಹೇಳಿದ್ದಾರೆ. ಈ ಹಿಂದಿನ ಪ್ರಧಾನಿ ಟ್ರುಡೋ ಅವಧಿಯಲ್ಲಿ ಭಾರತ ಮತ್ತು ಕೆನಡಾ ಸಂಬಂಧ ಪೂರ್ಣ ಹಳಸಿತ್ತು.