ಸಾರಾಂಶ
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಶುಕ್ರವಾರ ಆದೇಶಿಸಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿ ಶುಕ್ರವಾರ ಆದೇಶಿಸಿದೆ. ರಾಜ್ಯದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಅತಿಥಿ ಶಿಕ್ಷಕರ ನೇಮಕ ಇದೇ ಮೊದಲು.
ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ಒಟ್ಟು 51 ಸಾವಿರ ಅತಿಥಿ ಶಿಕ್ಷಕರನ್ನು ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಆದೇಶಿಸಿದೆ.
ಈ 51,000 ಅತಿಥಿ ಶಿಕ್ಷಕರುಗಳ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಉಪನ್ಯಾಸಕರ ಜಿಲ್ಲಾ/ತಾಲೂಕುವಾರು ವಿವರಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖಾ ಆಯುಕ್ತರು, ಅಪರ ಆಯುಕ್ತರು ಮತ್ತು ನಿರ್ದೇಶಕರುಗಳಿಗೆ ಸೂಚಿಸಲಾಗಿದೆ.
60 ಸಾವಿರಕ್ಕೂ ಹೆಚ್ಚು ಹುದ್ದೆ ಖಾಲಿ:
ಶಿಕ್ಷಣ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ರಾಜ್ಯದಲ್ಲಿರುವ 46 ಸಾವಿರಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 60 ಸಾವಿರಕ್ಕೂ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿ ಇವೆ. ಪ್ರತಿ ವರ್ಷ 6 ಸಾವಿರಕ್ಕೂ ಹೆಚ್ಚು ಶಿಕ್ಷಕರು ನಿವೃತ್ತರಾಗುತ್ತಲೇ ಬರುತ್ತಿದ್ದಾರೆ. ಆದರೆ, ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳೂ ಪೂರ್ಣ ಪ್ರಮಾಣದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಐದು ವರ್ಷಗಳ ಅಧಿಕಾರಾವಧಿಯಲ್ಲಿ 10ರಿಂದ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಂಡರೆ ಹೆಚ್ಚು ಎನ್ನುವಂತಾಗಿದೆ. ಇದರಿಂದ ವರ್ಷದಿಂದ ವರ್ಷಕ್ಕೆ ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸರ್ಕಾರಿಗಳ ಶಾಲೆಗಳ ಈ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಗಳಲ್ಲಿ ಕಾಯಂ ಶಿಕ್ಷಕರ ಬದಲು ಅತಿಥಿ ಶಿಕ್ಷಕರ ಅವಲಂಬನೆ ಹೆಚ್ಚಾಗುತ್ತಿದೆ. ಕಳೆದ ವರ್ಷ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿದ್ದ ಸರ್ಕಾರ ಈ ವರ್ಷ 51 ಸಾವಿರ ಮಂದಿ ನೇಮಕಾತಿಗೆ ಆದೇಶಿಸಿದೆ.
;Resize=(690,390))
)
;Resize=(128,128))
;Resize=(128,128))
;Resize=(128,128))
;Resize=(128,128))