ಒಂದೇ ದಿನದಲ್ಲಿ 110 ಸಾವು ತಾಲಿಬಾನ್ ಮಾದರಿ ಭಾರಿ ಹಿಂಸಾಚಾರ!ಮಾಜಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದ ಬೆನ್ನಲ್ಲೇ ಸೋಮವಾರ ಬಾಂಗ್ಲಾದೇಶದಲ್ಲಿ ದೇಶವ್ಯಾಪಿ ಭಾರೀ ಹಿಂಸಾಚಾರ ನಡೆದಿದೆ. ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಸಂಸದರು, ನಾಯಕರು, ಕಾರ್ಯಕರ್ತರನ್ನು ಗುರಿಯಾಗಿಸಿ ಪ್ರತಿಪಕ್ಷಗಳ ಕಾರ್ಯಕರ್ತರು, ಮತೀಯವಾದಿಗಳು ಭಾರೀ ಹಿಂಸಾಚಾರ ನಡೆಸಿದ್ದು, ಒಂದೇ ದಿನ 110ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.