ನನಗೆ ನಿದ್ದೆ ಬೇಕು, ರಾತ್ರಿ 8ರಬಳಿಕ ಕೆಲಸ ಮಾಡಲ್ಲ: ಬೈಡೆನ್ ಮುಂಬರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಡೆಮಾಕ್ರೆಟಿಕ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಹಾಲಿ ಅಧ್ಯಕ್ಷ ಜೋ ಬೈಡೆನ್ ಅವರಿಗೆ ವಯಸ್ಸಾಗಿದೆ, ಅವರಿಗೆ ಕೆಲಸ ಮಾಡಲು ಆಗುತ್ತಿಲ್ಲ ಎಂಬ ವರದಿಗಳ ನಡುವೆಯೇ ಇನ್ನೊಂದು ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.