ಟ್ರಂಪ್ರ ವ್ಯಾಪಾರ ನೀತಿ ಸಲಹೆಗಾರ ಪೀಟರ್ ನವರೋ ಅವರು ಮತ್ತೆ ಭಾರತದ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಾರಿ ಅವರು ರಷ್ಯಾ ತೈಲ ಖರೀದಿಯಿಂದ ಇಡೀ ದೇಶ ನಷ್ಟ ಅನುಭವಿಸುತ್ತಿದ್ದರೆ, ಬ್ರಾಹ್ಮಣ ರಷ್ಟೇ ಲಾಭ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಜಪಾನ್ ಪ್ರವಾಸ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರಧಾನಿ ಶಿಗೇರು ಇಶಿಬಾ ಅವರಿಗೆ ಅಮೂಲ್ಯ ಹರಳುಗಳಿಂದ ಮಾಡಿದ, ಬೆಳ್ಳಿಯ ಕಡ್ಡಿಗಳನ್ನು ಹೊಂದಿರುವ ರಾಮೆನ್ ಬಟ್ಟಲುಗಳನ್ನು ಹಾಗೂ ಅವರ ಪತ್ನಿಗೆ ವಿಶೇಷ ಪೇಪಿಯರ್ ಮ್ಯಾಚೆ ಪೆಟ್ಟಿಗೆಯಲ್ಲಿ ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.