ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನ ದಂಗೆ ಎದ್ದಿದ್ದು, ಪ್ರತಿಭಟನೆ 4ನೇ ದಿನ ಪೂರೈಸಿದೆ. ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಲಾಠಿಚಾರ್ಜ್, ಗೋಲಿಬಾರ್ ದಾಳಿಯಂಥ ದಮನಕಾರಿ ನೀತಿ ಪ್ರದರ್ಶಿಸುತ್ತಿದ್ದು, ಪೊಲೀಸರು ಮತ್ತು ಸೇನೆಯ ಗುಂಡಿನ ದಾಳಿಗೆ ಒಂದೇ 12 ದಿನ ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.
ಬ್ಯಾಕ್ಟೀರಿಯಾದಿಂದಾಗಿ ವಿಶ್ವಾದ್ಯಂತ ಹಲವು ಹೊಸಹೊಸ ರೋಗಗಳು ಉದ್ಭವಿಸುತ್ತಿರುವ ಹೊತ್ತಿನಲ್ಲಿ, ಸ್ಟಾನ್ಫರ್ಡ್ ವಿವಿಯ ವಿಜ್ಞಾನಿಗಳು ಕೃತಕ ಬುದ್ಧಿಮತ್ತೆ (ಎಐ) ಬಳಸಿ ಬ್ಯಾಕ್ಟೀರಿಯಾಗಳನ್ನು ಕೊಲ್ಲಬಲ್ಲ ವೈರಸ್ಗಳನ್ನು ಸೃಷ್ಟಿಸಿದ್ದಾರೆ.
ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಜನತೆ ದಂಗೆದಿದ್ದಾರೆ. ಪಾಕ್ ಸರ್ಕಾರವು ತಮ್ಮ ಪ್ರದೇಶದ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಸಾವಿರಾರು ಜನರು ಬೀದಿಗಿಳಿದು ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಇಬ್ಬರು ಬಲಿಯಾಗಿದ್ದಾರೆ.
ಅಮೆರಿಕದ ಡಲ್ಲಾಸ್ನಲ್ಲಿ ಸೆ.10ರಂದು ಪತ್ನಿ, ಪುತ್ರನ ಎದುರೇ ಭೀಕರವಾಗಿ ಹತ್ಯೆಗೀಡಾಗಿರುವ ಬೆಂಗಳೂರು ಮೂಲದ ಹೋಟೆಲ್ ವ್ಯವಸ್ಥಾಪಕ ಚಂದ್ರಮೌಳಿ ‘ಬಾಬ್’ ನಾಗಮಲ್ಲಯ್ಯ ಅವರ ಕುಟುಂಬದ ನೆರವಿಗೆ ಇದೀಗ ಅಮೆರಿಕದಲ್ಲಿ ನೆಲೆಸಿರುವ ಯುವ ಗುಜರಾತಿ ಉದ್ಯಮಿಗಳು ಮುಂದೆ ಬಂದಿದ್ದಾರೆ.