ನಮ್ಮಿಂದ 1 ಕಿ.ಮೀ. ದೂರದಲ್ಲೇರಾಕೆಟ್ ಬಿತ್ತು: ಉಡುಪಿ ನರ್ಸ್‘ನಾವಿರುವ ಕೇವಲ 1 ಕಿ.ಮೀ. ದೂರದಲ್ಲಿ ಹಮಾಸ್ ಉಗ್ರರು ಹಾರಿಸಿದ ರಾಕೆಟ್ ಬಿದ್ದಿದೆ. ಪುಣ್ಯವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಶನಿವಾರ ರಾತ್ರಿಯಿಡೀ ರಾಕೆಟ್ ದಾಳಿ ಆಗಿದೆ. ನಾವು ಸುಮಾರು ನೂರಿನ್ನೂರು ರಾಕೆಟ್ ಗಳು ಆಕಾಶದಲ್ಲಿ ಹಾರಾಡುವುದನ್ನು ನೋಡಿದ್ದೇವೆ. ಇವತ್ತು(ಭಾನುವಾರ) ಇನ್ನೂ ಇಲ್ಲಿ ಪೂರ್ತಿ ಕತ್ತಲಾಗಿಲ್ಲ, ಕತ್ತಲಾದ ಬಳಿಕ ಏನಾಗುತ್ತೋ ಗೊತ್ತಿಲ್ಲ!’ಇಸ್ರೇಲ್ನ ರಾಜಧಾನಿ ಟೆಲ್ಅವೀವ್ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿರುವ ಉಡುಪಿ ಸಮೀಪದ ಹೆರ್ಗಾ ಗ್ರಾಮದ ಪ್ರಮಿಳಾ ಪ್ರಭು ಅವರು ಹಮಾಸ್ ಉಗ್ರರ ದಾಳಿ ಬಳಿಕದ ಚಿತ್ರಣವನ್ನು ವಿವರಿಸಿದ್ದು ಹೀಗೆ.