ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ. ಇದು ನಿಜವೇ ಆಗಿದ್ದರೆ ಒಳ್ಳೆಯ ಹೆಜ್ಜೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾರತ-ಪಾಕ್ ಸಮರ ಸೇರಿ ಅಧಿಕಾರಕ್ಕೆ ಬಂದಾಗಿನಿಂದ ಟ್ರಂಪ್ ತಿಂಗಳಿಗೆ 1 ಯುದ್ಧ ನಿಲ್ಲಿಸಿದ್ದಾರೆ. ಹೀಗಾಗಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕು ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಆಗ್ರಹಿಸಿದ್ದಾರೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಾಕಾರಗೊಳ್ಳುವ ಲಕ್ಷಣ ಕ್ಷೀಣ ಆಗುತ್ತಿದ್ದಂತೆಯೇ ‘ಆಗಸ್ಟ್ 1ರಿಂದ ಭಾರತ ಶೇ. 25ರಷ್ಟು ಸುಂಕ ಪಾವತಿಸಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿನ ಪ್ರಮುಖ ಬೆಳವಣಿಗೆಯೊಂದರಲ್ಲಿ, ಆಕೆಯ ಗಲ್ಲು ಶಿಕ್ಷೆಯನ್ನು ಈಗ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ.
‘ಅಮೆರಿಕ ಮೊದಲು’ ನೀತಿಯ ಬೆಂಬಲಿಗರಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತೀಯರು ಸೇರಿದಂತೆ ವಿದೇಶಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಬದಲು ಆ ಅವಕಾಶವನ್ನು ಅಮೆರಿಕನ್ನರಿಗೆ ನೀಡುವಂತೆ ದೈತ್ಯ ಟೆಕ್ ಕಂಪನಿಗಳಾದ ಗೂಗಲ್, ಮೈಕ್ರೊಸಾಫ್ಟ್ಗೆ ಆದೇಶಿಸಿದ್ದಾರೆ.