ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಜಾರಿಗೊಳಿಸಿದ್ದು ತಾನೇ ಎಂದು ಹೇಳಿಕೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಅದೇ ಮಾತನ್ನು ಮಂಗಳವಾರ 25ನೇ ಬಾರಿ ಪುನರುಚ್ಚರಿಸಿದ್ದಾರೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಜೊತೆ ಮಾತುಕತೆ ನಡೆಸಲಿರುವ ಪ್ರಧಾನಿ, ಹೂಡಿಕೆ, ವ್ಯಾಪಾರ, ರಕ್ಷಣೆ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಇದೇ ವೇಳೆ ಭಾರತ ಮತ್ತು ಬ್ರಿಟನ್ ನಡುವಿನ ಮುಕ್ತ ವ್ಯಾಪಾಟ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
ಭೂಮಿಗೆ 18 ದಿನ ಕಳೆದ ನಂತರ ಬಂದಿರುವ ಶುಭಾಂಶು ಶುಕ್ಲಾ ಹಾಗೂ ಇತರ ಗಗನಯಾನಿಗಳು ಕೆಲವು ದಿನ ಸವಾಲಿನ ಸ್ಥಿತಿ ಎದುರಿಸಲಿದ್ದಾರೆ , ಇಲ್ಲಿನ ವಾತಾವರಣಕ್ಕೆ ಒಗ್ಗಿಕೊಳ್ಳುವಲ್ಲಿ ಕೆಲವು ಸವಾಲು ಎದುರಿಸಬೇಕಾಗುತ್ತದೆ. ಹೀಗಾಗಿ ಎಲ್ಲ ಯಾತ್ರಿಕರಿಗೆ 1 ವಾರ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದೆ
ರಾಜಕೀಯವಾಗಿ ಅಸ್ಥಿರವಾಗಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಗಳು ಮುಂದುವರೆದಿವೆ. ಹಳೆ ಢಾಕಾ ಪ್ರದೇಶದಲ್ಲಿ, ಮಿಟ್ಫೋರ್ಡ್ ಆಸ್ಪತ್ರೆ ಎದುರು ಗುಜರಿ ವ್ಯಾಪಾರಿಯಾದ ಲಾಲ್ ಚಂದ್ ಸೋಹಾಗ್ ಎಂಬುವವರ ಮೇಲೆ ಕಾಂಕ್ರೀಟ್ ಸ್ಲ್ಯಾಬ್ಗಳನ್ನು ಬಳಸಿ ದಾಳಿ ಮಾಡಿ, ಹತ್ಯೆಗೈಯ್ಯಲಾಗಿದೆ.
ದೇಶದ ಭೀಕರ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯು ಶುಕ್ರವಾರ ರಾತ್ರಿ ಬಿಡುಗಡೆಯಾಗಿದೆ.