ಸಾರಾಂಶ
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಗಲ್ಲು ಶಿಕ್ಷೆ ತೀರ್ಪು ನೀಡಿದ ತೀರ್ಪನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಇಸ್ಲಾಮಾಬಾದ್: ದೇಶದ್ರೋಹದ ಕೇಸಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ಗೆ ವಿಶೇಷ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆ ಸರಿ ಇದೆ ಎಂದು ಪಾಕಿಸ್ತಾನ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ.
ಮುಷರಫ್ 2007ರಲ್ಲಿ ಸಂವಿಧಾನವನ್ನು ಬದಿಗೊತ್ತಿ, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಈ ಕೇಸಲ್ಲಿ ವಿಶೇಷ ಕೋರ್ಟ್ ಮುಷರ್ರಫ್‌ಗೆ ಗಲ್ಲು ಶಿಕ್ಷೆ ವಿಧಿಸಿತ್ತು.
ಆದರೆ 2020ರಲ್ಲಿ ಲಾಹೋರ್ ಹೈಕೋರ್ಟ್ ಗಲ್ಲುಶಿಕ್ಷೆ ತೆರವು ಮಾಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರೀಂಕೋರ್ಟ್ ಬುಧವಾರ ನೀಡಿದ ತೀರ್ಪಲ್ಲಿ ಗಲ್ಲು ಶಿಕ್ಷೆ ಎತ್ತಿಹಿಡಿದಿದೆ.
ಆದರೆ 2016ರಿಂದ ದುಬೈನಲ್ಲಿದ್ದ ಪರ್ವೇಜ್ ಮುಷರ್ರಫ್ ದೀರ್ಘಾವಧಿಯ ಅನಾರೋಗ್ಯ ತುತ್ತಾಗಿ ಕಳೆದ ವರ್ಷ ಫೆ.5ರಂದು ಅಸುನೀಗಿದ್ದರು. ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಗಲ್ಲು ಶಿಕ್ಷೆ ತೀರ್ಪು ನೀಡಿದ ತೀರ್ಪನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.