ಸಾರಾಂಶ
ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಬಾಹ್ಯಾಕಾಶ ಪ್ರಯಾಣಕ್ಕೆ ಕೈಗೊಂಡಿದ್ದಾರೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬೋಯಿಂಗ್ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಶನಿವಾರ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ.
ನವದೆಹಲಿ: ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಬಾಹ್ಯಾಕಾಶ ಪ್ರಯಾಣಕ್ಕೆ ಕೈಗೊಂಡಿದ್ದಾರೆ.
ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬೋಯಿಂಗ್ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಶನಿವಾರ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ.
ಕಳೆದ ತಿಂಗಳ 7 ರಂದೇ ಸುನೀತಾ ಅಂತರಿಕ್ಷ ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣದಿಂದ ಮುಂದೂಡಲಾಗಿತ್ತು. ವಿಲಿಯಮ್ಸ್ ಹೊರತಾಗಿ ಬುಚ್ ವಿಲ್ಮೋರ್ ಕೂಡ ಅಂತರಿಕ್ಷಕ್ಕೆ ಪ್ರಯಾಣ ಕೈಗೊಳ್ಳಲಿದ್ದಾರೆ. ಸುನಿತಾ ಮತ್ತು ವಿಲ್ಮೋರ್ ಒಂದು ವಾರ ಬಾಹ್ಯಾಕಾಶದಲ್ಲಿಯೇ ಉಳಿಯಲಿದ್ದಾರೆ.
ದಿಲ್ಲೀಲಿ 52.9 ಡಿಗ್ರಿ ಉಷ್ಣ
ದಾಖಲಾಗಿದ್ದು ಸೆನ್ಸರ್ ದೋಷದಿಂದ : ಐಎಂಡಿವದೆಹಲಿ: ನಗರದ ಮಂಗೇಶ್‌ಪುರ ಹವಾಮಾನ ಕೇಂದ್ರದಲ್ಲಿ ಮೇ 29ರಂದು 52.9 ಡಿಗ್ರಿ ಸೆಲ್ಶಿಯಸ್ ದಾಖಲಾಗುವುದಕ್ಕೆ ಮಾಪನಾ ಕೇಂದ್ರದ ಸೆನ್ಸರ್ ದೋಷ ಕಾರಣ. ಅಲ್ಲಿ ಅಂದು ನಿಜವಾಗಿಯೂ ಅಷ್ಟು ತಾಪಮಾನ ದಾಖಲಾಗಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪತ್ರಕರ್ತರಿಗೆ ದೋಷದ ಕುರಿತು ಮಾಹಿತಿ ನೀಡಿದ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ, ‘ಮಂಗೇಶ್‌ಪುರ ಸ್ವಯಂಚಾಲಿತ ಹವಾಮಾನ ಕೇಂದ್ರದಲ್ಲಿ ಪರಿಶೀಲನೆ ನಡೆಸಿದ್ದು, ಅಲ್ಲಿನ ಸೆನ್ಸರ್‌ನಲ್ಲಿ ದೋಷವುಂಟಾಗಿ ಎಂದಿಗಿಂತ 3 ಡಿಗ್ರಿ ತಾಪ ಹೆಚ್ಚಾಗಿ ತೋರಿಸಿರುವುದು ಪತ್ತೆಯಾಗಿದೆ’ ಎಂದು ತಿಳಿಸಿದರು.
ವಾಣಿಜ್ಯ ಎಲ್‌ಪಿಜಿ ದರ ₹69 ಇಳಿಕೆ: ಬೆಂಗ್ಳೂರಲ್ಲಿ 19 ಕೆಜಿಗೆ 1755 ರು.
ನವದೆಹಲಿ: ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 69.50 ರು.ನಷ್ಟು ಇಳಿಸಿವೆ. ಹೀಗಾಗಿ ಬೆಂಗಳೂರಿನಲ್ಲಿ 19 ಕೆಜಿಯ ಸಿಲಿಂಡರ್ ದರ 1755 ರು.ಗೆ ತಲುಪಿದೆ. ಈ ಹಿಂದೆ ಮೇ 1 ರಂದು ಕೂಡಾ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 19 ರು.ಕಡಿತಗೊಳಿಸಲಾಗಿತ್ತು. ಆದರೆ ಗೃಹ ಬಳಕೆಯ 14.2 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.